April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಅಂಗವಾಗಿ ಗುರುಪೂಜೆ ಮತ್ತು ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಂಘದ ಪ್ರಧಾನ ಅರ್ಚಕರಾದ ರಘುನಾಥ್ ಶಾಂತಿಯವರ ವೈದಿಕ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪಂಚಶ್ರೀ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನೆ ನೆರವೇರಿತು.

ನಂತರ ನಡೆದ ನೂತನ ಆಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಸಂಘದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ನಿರ್ಗಮನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಎಚ್.ಎಸ್ ವಹಿಸಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಸಂತೋಷ್. ಪಿ.ಕೋಟ್ಯಾನ್ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಕೋಟ್ಯಾನ್ ರವರು ಶರತ್ ಅಂಚನ್ ರವರಿಗೆ ಹಾಗೂ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ಪುಷ್ಪಾ ಗಿರೀಶ್ ಅವರು ಭಾರತಿ ಸಂತೋಷ್ ಸಾಲಿಯಾನ್ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಎಚ್ ಧರ್ಣಪ್ಪ ಪೂಜಾರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ರಂಜಿತ್ ಹೆಚ್.ಡಿ,ಕೋಶಾಧಿಕಾರಿ ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ರವೀಂದ್ರ ಬಿ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ನಿರ್ದೇಶಕರುಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ದಿನೇಶ್ ಪೂಜಾರಿ ಅಂತರ, ಯೋಗೀಶ್ ಯೈಕುರಿ, ಪ್ರವೀಣ್ ಪೂಜಾರಿ ಲಾಂತ್ಯಾರು, ಯತೀಶ್ ವೈ ಎಲ್ ಬಳಂಜ, ಸದಾನಂದ ಪೂಜಾರಿ ಬೊಂಟ್ರೊಟ್ಟು, ಜಗದೀಶ್ ಪೂಜಾರಿ ತಾರಿಪಡ್ಪು, ರಂಜಿತ್ ಪೂಜಾರಿ ಮಜಲಡ್ಡ, ರಕ್ಷಿತ್ ಪೂಜಾರಿ ಬಗ್ಯೋಟ್ಟು ,ಪವನ್ ಪೂಜಾರಿ ತೆಂಕಕಾರಂದೂರು, ಯುವ ಬಿಲ್ಲವ ವೇದಿಕೆ ಕಾರ್ಯದರ್ಶಿ ಲತೇಶ್ ಪೆರಾಜೆ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅಶ್ವಿತಾ, ಸಂಫದ ಮಾಜಿ ಅಧ್ಯಕ್ಷರುಗಳು, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.

ಸದಾನಂದ ಸಾಲಿಯಾನ್ ಬಳಂಜ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!