September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ಕಾನೂನು ಸಲಹೆ ಪಡೆಯುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ,ಹರೀಶ್ ಪೂಂಜ,ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ್ ಕಾಮತ್ ,ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

Related posts

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!