April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ 10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ನಡೆಯಲಿದೆ.

ಮಧ್ಯಾಹ್ನ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಬಳಂಜ ಬಿಲ್ಲವ ಸಂಘದ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಲಿದ್ದಾರೆ.

ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ಧಾರ್ಮಿಕ ಉಪನ್ಯಾಸ ಮಾಡಲಿದ್ದಾರೆ. ಮುಖ್ಯ ಆತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಪ್ರಗತಿಪರ ಕೃಷಿಕರಾದ ಸುರೇಶ್ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ,ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ,ಸದಸ್ಯ ರವೀಂದ್ರ ಬಿ ಅಮೀನ್, ಯುವ ಉದ್ಯಮಿ ಪ್ರವೀಣ್ ಪೂಜಾರಿ ಮಂಗಳೂರು,ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಕ್ರಿಡಾಕೂಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನೇರವೇರಿಸಲಿದ್ದಾರೆ. ಮುಖ್ಯ ಅತಿಧಿಗಳಾಗಿ ಗ್ರಾ‌ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಕೃಷಿಕ ಸೀತರಾಮ ಪೂಜಾರಿ,ಉದ್ಯಮಿ ಜನಾರ್ಧನ ಪೂಜಾರಿ,ಗ್ರಾ.ಪಂ ಸದಸ್ಯ ಜಯಶೆಟ್ಟಿ ಪಾದೆ,ಬ್ರಹ್ಮಶ್ರೀ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ, ಕಂಚಿನಡ್ಕ ಕ್ಷೇತ್ರದ ಅಧ್ಯಕ್ಷ ವಿನಯ್ ಶೆಟ್ಟಿ ಭಾಗವಹಿಸಲಿದ್ದಾರೆ.

ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ದೆ,ಬಾಲಕ- ಬಾಲಕಿಯರಿಗೆ, ಯುವಕ, ಯುವತಿಯರಿಗೆ, ಪುರಷರಿಗೆ, ಮಹಿಳೆಯರಿಗೆ ವಿವಿಧ ಸ್ಪರ್ದೆಗಳು ನಡೆಯಲಿದೆ. ವಾಲಿಬಾಲ್ ಹಗ್ಗಜಗ್ಗಾಟ,ತ್ರೋಬಾಲ್, ವಿವಿಧ ಫನ್ನಿ ಗೇಮ್, ಗೋಣಿ ಚೀಲ ಸ್ಪರ್ದೆಗಳು ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya
error: Content is protected !!