ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಹೇಳಿದರು.
ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳ ಮುಂದೆ ಗುರಿ ಇರಬೇಕು; ಹಿಂದೆ ಗುರು ಇರಬೇಕು. ದಾರಿ ತೋರಿ ಮುನ್ನಡೆಸುವ ಗುರುವಿಗೆ ತಂದೆ-ತಾಯಿಗೆ ನೀಡುವ ರೀತಿಯಲ್ಲಿಯೇ ಗೌರವದ ಸ್ಥಾನ ನೀಡಬೇಕು ಎಂದು ಅವರು ತಿಳಿಸಿದರು. ನಾನು ಸೇವೆ ಸಲ್ಲಿಸಿದ ಈ ಶಾಲೆಯಲ್ಲಿ ನನ್ನ ವಿದ್ಯಾರ್ಥಿಗಳೇ ಶಿಕ್ಷಕರಾಗಿದ್ದು ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ಸಂತೋಷ ತಂದಿದೆ” ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿ, ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು.
ವಿದ್ಯಾರ್ಥಿಗಳಾದ ಪ್ರಥಮ್ ಸ್ವಾಗತಿಸಿ, ಶೇಕ್ ಅಬ್ದುಲ್ ರಿಹಾನ್ ವಂದಿಸಿ, ಯೋಗಾನಂದ ನಿರೂಪಿಸಿದರು.