ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ.ಎಡ್. ಕಾಲೇಜು ಸಹಯೋಗದಲ್ಲಿ ಕರಕುಶಲ ಕಲೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜಿನಲ್ಲಿ ಸೆ.2ರಂದು ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಕಾರ್ಯಾಗಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿ ಅವರಲ್ಲಿರುವ ಕೌಶಲಗಳನ್ನು ಗುರುತಿಸಿ, ನಿರಂತರ ಪ್ರೋತ್ಸಾಹ, ಸಹಕಾರ ನೀಡಿದಾಗ ಹೊಸತನ ಸಾಧ್ಯವಾಗುತ್ತದೆ. ಕರಕುಶಲ ಕಲೆಯಿಂದ ಹೊಸ ಹೊಸ ಉತ್ಪನ್ನಗಳು ಉತ್ಪತ್ತಿಯಾಗುತ್ತವೆ. ಅದಕ್ಕಾಗಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮ ಸದುಪಯೋಗವಾಗಲಿ ಮತ್ತು ನಿಮ್ಮ ಜೀವನ ನಿರ್ವಹಣೆ ಮಾಡಲು ಸಹಕಾರಿ ಆಗಲಿ” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ. ಅವರು ಮಾತನಾಡಿ, “ಪ್ರಶಿಕ್ಷಣಾರ್ಥಿಗಳು ಇಲ್ಲಿ ಕಲಿತ ಕಲೆಯನ್ನು ನಂತರ ತಮ್ಮ ತಮ್ಮ ಮನೆಗಳಲ್ಲಿ ಹಾಗೂ ತಾವು ಮುಂದೆ ದುಡಿಯಲು ಹೋದ ಶಾಲೆಯ ಮಕ್ಕಳಿಗೆ ಕಲಿಸಿ” ಎಂದು ಸೂಚನೆ ನೀಡಿದರು.

“ನಮ್ಮ ಈ ಎರಡೂ ಸಂಸ್ಥೆಗಳು ಈ ಹಿಂದೆಯೂ ಅನೇಕ ಬಾರಿ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದು, ಮುಂದೆಯೂ ಇದೇ ರೀತಿ ಮುಂದುವರಿಯಲಿ” ಎಂದು ಅವರು ಆಶಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ದಿವ್ಯ ಅವರು ಕರಕುಶಲ ವಸ್ತುಗಳ ತಯಾರಿಕೆ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ವಿವಿಧ ಬಗೆಯ ವಸ್ತುಗಳನ್ನು ತಯಾರಿಸಿದರು.

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ಶಿಕ್ಷಕಿ ಅನುಷಾ ಎ. ಜೆ. ಸ್ವಾಗತಿಸಿ, ವಂದಿಸಿದರು. ಯತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya
error: Content is protected !!