ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ.5 ರಂದು ವಿದ್ಯಾರ್ಥಿಗಳಿಂದ ಶಿಕ್ಷಕರಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಮಹತ್ವ, ಗುರು ನಮನ ನೃತ್ಯ ಹಾಗೂ ಗುರುಗಳ ಕುರಿತು ಹಾಡನ್ನು ವಿದ್ಯಾರ್ಥಿಗಳಿಂದ ಹಾಡಲಾಯಿತು. ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟಗಳನ್ನು ಆಡಿಸಿ ವಿದ್ಯಾರ್ಥಿಗಳೇ ತಯಾರು ಮಾಡಿದ ಆಕರ್ಷಕ ಬಹುಮಾನಗಳನ್ನು ಶಿಕ್ಷಕರಿಗೆ ವಿತರಿಸಲಾಯಿತು.

ಶಿಕ್ಷಕಿ ಅಶ್ವಿತಾ ಮತ್ತು ಮಾಧುರ ಸಂಯೋಜಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಸುಶಾಂತ್ ಮತ್ತು ನೇಹಾ ಬೀಡೆ ಕಾರ್ಯಕ್ರಮ ನಿರೂಪಿಸಿದರು.