26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಹೇಳಿದರು.


ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳ ಮುಂದೆ ಗುರಿ ಇರಬೇಕು; ಹಿಂದೆ ಗುರು ಇರಬೇಕು. ದಾರಿ ತೋರಿ ಮುನ್ನಡೆಸುವ ಗುರುವಿಗೆ ತಂದೆ-ತಾಯಿಗೆ ನೀಡುವ ರೀತಿಯಲ್ಲಿಯೇ ಗೌರವದ ಸ್ಥಾನ ನೀಡಬೇಕು ಎಂದು ಅವರು ತಿಳಿಸಿದರು. ನಾನು ಸೇವೆ ಸಲ್ಲಿಸಿದ ಈ ಶಾಲೆಯಲ್ಲಿ ನನ್ನ ವಿದ್ಯಾರ್ಥಿಗಳೇ ಶಿಕ್ಷಕರಾಗಿದ್ದು ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ಸಂತೋಷ ತಂದಿದೆ” ಎಂದು ಅವರು ಹರ್ಷ ವ್ಯಕ್ತಪಡಿಸಿದರು.


ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿ, ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು.


ವಿದ್ಯಾರ್ಥಿಗಳಾದ ಪ್ರಥಮ್ ಸ್ವಾಗತಿಸಿ, ಶೇಕ್ ಅಬ್ದುಲ್ ರಿಹಾನ್ ವಂದಿಸಿ, ಯೋಗಾನಂದ ನಿರೂಪಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!