September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಂಘದ ಆಡಳಿತ ಮಂಡಳಿ ಹಾಗೂ ಹಾಗೂ ಸದಸ್ಯರ ಸಹಕಾರದಿಂದ 2021-22 ನೇ ಸಾಲಿನಲ್ಲಿ ಸಂಘವು ಮಾಡಿರುವ ಗಣನೀಯ ಸಾಧನೆಗೆ ಕರ್ನಾಟಕ ರಾಜ್ಯ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಅಧ್ಯಕ್ಷ ಹರೀಶ್ ಸಾಲ್ಯಾನ್ ಮೊರ್ತಾಜೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಹಾಗೂ ನಿರ್ದೇಶಕ ರಮೇಶ್ ಕೆಂಗಾಜೆ ರವರು ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಬಂಗಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕಿನ ನಿರ್ದೇಶಕರಾದ ವಿನಯ ಚಂದ್ರ, ಸಿಬ್ಬಂದಿಗಳಾದ ರಮಾನಂದ, ಬಾಲಕೃಷ್ಣ, ಚರಣ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya
error: Content is protected !!