24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಂಘದ ಆಡಳಿತ ಮಂಡಳಿ ಹಾಗೂ ಹಾಗೂ ಸದಸ್ಯರ ಸಹಕಾರದಿಂದ 2021-22 ನೇ ಸಾಲಿನಲ್ಲಿ ಸಂಘವು ಮಾಡಿರುವ ಗಣನೀಯ ಸಾಧನೆಗೆ ಕರ್ನಾಟಕ ರಾಜ್ಯ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಅಧ್ಯಕ್ಷ ಹರೀಶ್ ಸಾಲ್ಯಾನ್ ಮೊರ್ತಾಜೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಹಾಗೂ ನಿರ್ದೇಶಕ ರಮೇಶ್ ಕೆಂಗಾಜೆ ರವರು ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಬಂಗಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕಿನ ನಿರ್ದೇಶಕರಾದ ವಿನಯ ಚಂದ್ರ, ಸಿಬ್ಬಂದಿಗಳಾದ ರಮಾನಂದ, ಬಾಲಕೃಷ್ಣ, ಚರಣ್ ಉಪಸ್ಥಿತರಿದ್ದರು.

Related posts

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!