ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ದ.ಕ. ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ, ದ.ಕ. ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಬಂದಾರು ಸಹಯೋಗದೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ
ಬಾಲಕ-ಬಾಲಕಿಯರ 14 ಮತ್ತು 17ನೇ ವಯೋಮಾನದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟವು ಸೆ.7 ರಂದು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಗ್ರಾ.ಪಂ. ಅಧ್ಯಕ್ಷ ದಿನೇಶ್ ಖಂಡಿಗ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್. , ದ.ಕ.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ದ.ಕ.ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯಸ್, ಕೋಶಾಧಿಕಾರಿ ತ್ಯಾಗಂ ಹರೇಕಳ, ಬೆಳ್ತಂಗಡಿ ತಾಲೂಕು ಸಮನ್ವಯಾಧಿಕಾರಿ ಮೋಹನ್, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ರಾವ್, ದ.ಕ.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿಮಲ್ ನೆಲ್ಯಾಡಿ, ದ.ಕ. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ ಗೌಡ, ದ.ಕ.ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಜೇಶ್ ನೆಲ್ಯಾಡಿ, ಪ್ರಾಥಮಿಕ ಶಾಲಾ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್, ಕರ್ನಾಟಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಬೆಳ್ತಂಗಡಿ ತಾಲೂಕು ಪ್ರೌ. ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಸುಮತಿ ಪಿ.ಎನ್., ಪಂದ್ಯಾಟದ ಪ್ರಧಾನ ತೀರ್ಪುಗಾರ ಅಲೆಕ್ಸ್ ನೆರಿಯ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರ. ಕಾರ್ಯದರ್ಶಿ ನಿರಂಜನ್, ಸಿ.ಆರ್. ಪಿ. ಸಂಧ್ಯಾ, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪಾವತಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಉದಯ ಬಿ.ಕೆ., ಅಬ್ಬಾಸ್ ಬಟ್ಲಡ್ಕ, ವಾಲಿ ಬಾಲ್ ಪಂದ್ಯಾಟದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಉದಯ ಭಟ್ ಕೊಳಬ್ಬೆ, ಎಸ್‌ ಡಿ ಎಂ ಸಿ ಅಧ್ಯಕ್ಷ ಉಮೇಶ ಗೌಡ ಪೊಯ್ಯೋಳೆ, ಹ.ವಿ. ಸಂಘದ ಅಧ್ಯಕ್ಷ ಸುಂದರ ಗೌಡ ನಿನ್ನಿಕಲ್ಲು ಉಪಸ್ಥಿತರಿದ್ದರು.

ಸಮಾರೋಪ ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ಅವರನ್ನು ಹೆತ್ತವರು ಹಾಗೂ ಪತ್ನಿಯ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ರಾಜ್ಯ,ರಾಷ್ಟ್ರಮಟ್ಟಗಳ ವಾಲಿಬಾಲ್ ಪಂದ್ಯಾಟಗಳಲ್ಲಿ ಭಾಗವಹಿಸಿದ್ದ ಹಳೆ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಮುಖ್ಯೋಪಾಧ್ಯಾಯ ಮಂಜು ನಾಯ್ಕ್ ಸ್ವಾಗತಿಸಿದರು.

ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು, ಸಂಘ-ಸಂಸ್ಥೆಗಳ ಮುಖ್ಯಸ್ಥರು, ಹಾಲಿ- ಮಾಜಿ ಜನಪ್ರತಿನಿಧಿಗಳು, ಕ್ರೀಡಾಭಿಮಾನಿಗಳು, ವಿದ್ಯಾಭಿಮಾನಿಗಳು ಗ್ರಾಮಸ್ಥರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.

Leave a Comment

error: Content is protected !!