30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ -2023 ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆಯು ಸೆ.10 ರಂದು ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ನಡೆಯಲಿದೆ.

ನರಸಿಂಹರಾಜಪುರ ಬಸ್ತಿಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಪರಮಪೂಜ್ಯ ಶ್ರೀ ಶ್ರೀಮದ್ ಅಭಿನವ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಮುಖ್ಯಮಂತ್ರಿಯವರ ಉಪಕಾರ್ಯದರ್ಶಿ ಅರುಣ್ ಪುರ್ಟಾಡೋ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ.

ಎಕ್ಸೆಲ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಭಿರಾಮ್ ಬಿ ಎಸ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ ಗೌರವ ಉಪಸ್ಥಿತರಿರುವರು.

ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ವಿ.ಕೆ ಜೋಡಿ ತಾರೆ ಖ್ಯಾತಿಯ ಕೃಷ್ಣರಾಜ್ ಎನ್ ಮತ್ತು ಬಳಗದವರಿಂದ ಮ್ಯೂಸಿಕ್ ಮಸ್ತಿ ನಡೆಯಲಿದೆ.

Related posts

ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!