29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸೆ. 8ರಂದು ಹೈಕೋರ್ಟಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.


ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯರವರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿತ್ತು. ನೈಜ ಅಪರಾಧಿಗಳನ್ನು ಬಂಧಿಸಬೇಕು, ತನಿಖೆಯ ಆರಂಭದಲ್ಲಿ ಲೋಪ ಎಸಗಿರುವ ತನಿಖಾಧಿಕಾರಿ ಮತ್ತು ವೈದ್ಯಾಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇತ್ತೀಚೆಗೆ ನಡೆದ ಹಲವು ಪ್ರತಿಭಟನೆಗಳಲ್ಲಿ ಆಗ್ರಹವಾಗಿದೆ.


ಇದೀಗ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೆ.8ರಂದು ಉಚ್ಛ ನ್ಯಾಯಾಲ ಯದಲ್ಲಿ ವಿಚಾರಣೆಗೆ ಬರಲಿದೆ.
ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಲಿದ್ದಾರೆ.

Related posts

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!