23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಫಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya
error: Content is protected !!