24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಸೆ.8 ರಂದು ವಿಲೇವಾರಿಗೊಳಿಸಿದೆ.


ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು. ಸರಕಾರ ಅಥವಾ ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

ತನಿಖಾ ಲೋಪದ ಅಂಶವನ್ನು ಮೇಲ್ಮನವಿಯಲ್ಲೇ ಪರಿಗಣಿಸಲು ಕಾನೂನಿಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸಭೆ, ಸಮಾರಂಭ, ಧರಣಿ ಹಾಗೂ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ .ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ ಕಾನೂನಿನ ಮಿತಿ ಒಳಗಡೆ ವ್ಯವಹರಿಸಬೇಕಾಗುತ್ತದೆ ಎಂದು ಅಭಿಪ್ರಾಯ ತಿಳಿಸಿದ ವಿಭಾಗೀಯ ನ್ಯಾಯಪೀಠ ಸಂತ್ರಸ್ತ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡಿ ಎಂದು ಸಲಹೆ ನೀಡಿದರು.

Related posts

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya
error: Content is protected !!