25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ತಾಲೂಕು ಪಂಚಾಯತ್ ಆವರಣ ಬೆಳ್ತಂಗಡಿಯಲ್ಲಿ ಸೆ.11 ರಂದು ನಡೆಯಿತು.

ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಶಾಸಕರ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಮಂಗಳೂರು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಆರ್.ವೇಣುಗೋಪಾಲ್, ಪುತ್ತೂರು ಸಹಾಯಕ ವಿಭಾಗ ಅಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್ ಟಿ, ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿತೀನ್ ಉಪಸ್ಥಿತರಿದ್ದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಜಿ.ಪಂ.ಸದಸ್ಯರು, ತಾ.ಪಂ.ಮಾಜಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರು, ತಾ.ಪಂ.ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಪಿಡಿಓಗಳು ಹಾಜರಿದ್ದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು.

Related posts

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
error: Content is protected !!