29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

ವೇಣೂರು:2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು ಇದರ ಸಮಾಲೋಚನೆ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳೊಂದಿಗೆ ಸೆ. 11 ರಂದು ಶ್ರೀ ಬಾಹುಬಲಿ ಸಭಾ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಮೂಡಬಿದ್ರೆ ಶ್ರೀ ಜೈನ ಮಠದ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ,ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ಮಾಜಿ ಸಚಿವ ಅಭಯಚಂದ್ರ ಜೈನ್,ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ,ಸಹಾಯಕ ಕಮೀಷನರ್ ಗೀರೀಶ್ ನಂದನ್, ಪೋಲೀಸ್ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸಮಾಲೋಚನೆ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.ರಸ್ತೆ ಡಾಮರೀಕರಣ,ಹೈಮಾಸ್ಕ್ ದೀಪ ವಿಸ್ತರಣೆ,ನೀರಿನ ವ್ಯವಸ್ಥೆ, ತ್ಯಾಗಿಭವನ, ಭೋಜನ ಶಾಲೆ,ಸಮುದಾಯ ನಿರ್ಮಾಣ,ಸಂಪರ್ಕ ರಸ್ತೆ ಅಗಲೀಕರಣ, ವಿದ್ಯುತ್ ಕಂಬಗಳ ಬದಲಾವಣೆ ಹಾಗೂ ವಿವಿಧ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆಗಳು ನಡೆಯಿತು.

ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.ಮಸ್ತಕಾಭಿಷೇಕ ಸಮಿತಿ ಕಾರ್ಯದರ್ಶಿ ಮಹಾವೀರ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya
error: Content is protected !!