ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷ ರತ್ನಾಕರ ಬುಣ್ಣನ್ ಇವರು ವಹಿಸಿದ್ದರು. ಹಿರಿಯರಾದ ಜಯರಾಜ್ ಕಾಬಯ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಪ್ರಾಂಶುಪಾಲರು ನಡ ಕಾಲೇಜು ಬೆಳ್ತಂಗಡಿ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಯಾದ ದಯಾನಂದ ಪೂಜಾರಿ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ನಿವೃತ್ತ ಮುಖ್ಯೋಪಾಧ್ಯಾಯರಾದ ಪದ್ಮರಾಜ್ ಶೆಟ್ಟಿ, ಮರೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವನಿಂಗಪ್ಪ ಗಾನಿಗ , ಹಿರಿಯರಾದ ಭರತ್ ಕುಮಾರ್ ಜೈನ್, ಮಾಜಿ ಪಂಚಾಯತ್ ಅಧ್ಯಕ್ಷರಾದ ಪದ್ಮಶ್ರೀ ಜೈನ್, ವಲಯದ ಮೇಲ್ವಿಚಾರಕರಾದ ದಮಯಂತಿ , ಒಕ್ಕೂಟದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು , ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆ ಮೇಲ್ವಿಚಾರಕರಾದ ದಮಯಂತಿ ನೆರವೇರಿಸಿದರು. ಒಕ್ಕೂಟದ ಅಧ್ಯಕ್ಷ ಶುಭರಾಜ್ ಹೆಗ್ಡೆ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಹರಿಣಾಕ್ಷಿ ಧನ್ಯವಾದವಿತ್ತರು. ಸಭಾ ಕಾರ್ಯಕ್ರಮದ ನಂತರ ಆಟೋಟ ಸ್ಪರ್ಧೆಗಳು ನಡೆದವು. ನಂತರ ಸಂಜೆಯ ಸಭಾ ಕಾರ್ಯಕ್ರಮ ನಡೆಸಿ ಬಹುಮಾನ ವಿತರಣೆ ಮಾಡಲಾಯಿತು.