29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

ಬೆಳ್ತಂಗಡಿ: ಯೂ ಟ್ಯೂಬ್ ಚಾನೆಲ್‌ಗೆ ಸ೦ದರ್ಶನ ನೀಡಿ ಹಿಂತಿರುಗುತ್ತಿದ್ದ ವೇಳೆ ಉಜಿರೆ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕರವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರ ಮೇಲೆ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿ, 15 ದಿನಗಳ ಒಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.


ಮಂಗಳೂರಿನ ಯೂಟ್ಯೂಬ್ ಚಾನೆಲ್‌ನ ಕಾರ್ಯಕ್ರಮದಲ್ಲಿ ಭಾಸ್ಕರ ನಾಯ್ಕರವರು ನೀಡಿದ ಸಂದರ್ಶನದಲ್ಲಿ ಅವರು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿಯವರ ಮೇಲೆ ಕೆಲ ಆರೋಪಗಳನ್ನು ಮಾಡಿದ್ದರು. ಸಂದರ್ಶನ ಮುಗಿಸಿ ಭಾಸ್ಕರ ನಾಯ್ಕರವರು ವಾಪಸು ಉಜಿರೆಯ ತನ್ನ ಮನೆಗೆ ಬರುತ್ತಿರುವಾಗ ಸಂಜೆ 5 ಗಂಟೆ ಸುಮಾರಿಗೆ ಉಜಿರೆ ಗ್ರಾಮದ ಪಾಣೆಯಾಲು ಎಂಬಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿ ಕಾರಿನಲ್ಲಿ ಬಂದು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ತಾನು ಜೋರಾಗಿ ಬೊಬ್ಬೆ ಹೊಡೆದಾಗ ಮನೆಯಲ್ಲಿದ್ದ ಅವರ ಪತ್ನಿ ಮಮತಾ ಬಿಡಿಸಲು ಪ್ರಯತ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಭಾಸ್ಕರ ನಾಯ್ಕ ಅವರು ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದರು.


ಈ ದೂರಿನಾದಾರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಇತರರ ಮೇಲೆ ಪೊಲೀಸರರು ಕೇಸು ದಾಖಲಿಸಿಕೊಂಡಿದ್ದರು. ಆದರೆ ಅವರ ಮೇಲೆ ಯಾವುದೇ ಕ್ರಮಗಳನ್ನು ಪೊಲೀಸರು ಕೈಗೊಂಡಿಲ್ಲ ಎಂದು ಭಾಸ್ಕರ ನಾಯ್ಕ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು
ಪ್ರಕರಣದ ಕುರಿತು 15 ದಿನಗಳೊಳಗೆ ವರದಿ ನೀಡುವಂತೆ ಆದೇಶಿಸಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
error: Content is protected !!