23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒಕ್ಕಲಿಗರ ಹೋರಾಟ ಸಮಿತಿಯಿಂದ ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರದ ತಾಲೂಕು ಕಚೇರಿ ಎದುರು ನಡೆಯಲಿರುವ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹಕ್ಕೆ ಸೆ.12ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.


ಪ್ರಕರಣದ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷರಾದ ಪದ್ಮ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ ಸವಣಾಲು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಡಿರುದ್ಯಾವರ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಪ್ರಸನ್ನ ಗೌಡ ಬಾರ್ಯ, ವಿಜಯಗೌಡ, ಉಷಾ ವೆಂಕಟರಮಣ ಗೌಡ, ಸುರೇಶ್ ಕೌಡಂಗೆ ಹಾಗೂ ಗ್ರಾಮ ಸಮಿತಿ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸಿತರಿದ್ದರು.

Related posts

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
error: Content is protected !!