24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

ಬೆಳ್ತಂಗಡಿ: ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರ ಅಡಿಯಲ್ಲಿ ರಾಜ್ಯದಲ್ಲಿ ನೋಂದಣಿಗೊಂಡಿರುವ ಸಂಘ ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಇರುವ ಸಂಘ ಸಂಸ್ಥೆಗಳನ್ನು ಸಂಘಗಳ ಸದಸ್ಯರ ಹಿತದೃಷ್ಟಿಯಿಂದ ಮತ್ತೊಂದು ಬಾರಿ ದಂಡ ವಿಧಿಸಿ, ಷರತ್ತುಗಳಿಗೊಳಪಟ್ಟು ಅನುಮತಿ ನೀಡಲು ರಾಜ್ಯದ ಸಹಕಾರ ಇಲಾಖೆ ಆದೇಶ ಮಾಡಿದೆ.


ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಈಚೆಗೆ ಸಹಕಾರ ಸಚಿವ ರಾಜಣ್ಣ ಅವರಲ್ಲಿ ಆಗುತ್ತಿದ್ದ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಇದಕ್ಕೆ ಶೀಘ್ರವಾಗಿ ಸ್ಪಂದಿಸಿದ ಸಚಿವರು ಸಹಕಾರ ಸಂಘಗಳ ನಿಬಂಧಕರ ಮೂಲಕ ಆದೇಶ ಹೊರಡಿಸಿದ್ದಾರೆ.


5 ವರ್ಷಗಳಿಗೆ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಬಾಕಿ ಇರುವ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. ೩೦೦೦ ಹೆಚ್ಚುವರಿ ದಂಡ ಪಾವತಿಸಿ2024 ರ ಜೂ.30 ರೊಳಗೆ ಫೈಲಿಂಗ್ ಮಾಡಕೊಳ್ಳಬಹುದಾಗಿದೆ. ಸಂಘದ ಎಲ್ಲಾ ಆಡಳಿತ ಆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿಲಾಗಿದೆ.

Related posts

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya
error: Content is protected !!