April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

ನಡ: ನಡಗುತ್ತು ಮನೆತನದ ಅನೀಷ್ ಜೈನ್ ಇವರು ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ್ದ ಕ್ರೀಡಾ ಸಮವಸ್ತ್ರಗಳನ್ನು ಸೆ.11 ರಂದು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೀಷ್ ಜೈನ್ ರವರು ಕ್ರೀಡಾ ತರಬೇತುದಾರ ಮಹಾವೀರ ಜೈನ್ ರವರ ಬೇಡಿಕೆಗೆ ತಕ್ಷಣ ಸ್ಪಂದಿಸಿ ಈ ಕೊಡುಗೆಯನ್ನು ನೀಡಿರುತ್ತಾರೆ.

ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅನೀಷ್ ಜೈನ್, ಪ್ರೌಢಶಾಲೆಗೆ ನಡಗುತ್ತು ನೀಡಿದ ಸಹಾಯವನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಕೊಡುಗೆ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸ್ಥಾಪಕ ಅಧ್ಯಕ್ಷ ರಾಜಶೇಖರ ಅಜ್ರಿ, ಕ್ರೀಡಾ ತರಬೇತುದಾರ ಮಹಾವೀರ ಜೈನ್, ಪತ್ರಕರ್ತರಾದ ಶಿಬಿ ಧರ್ಮಸ್ಥಳ, ಪ್ರಸಾದ್, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರುಗಳು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya
error: Content is protected !!