ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒಕ್ಕಲಿಗರ ಹೋರಾಟ ಸಮಿತಿಯಿಂದ ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರದ ತಾಲೂಕು ಕಚೇರಿ ಎದುರು ನಡೆಯಲಿರುವ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹಕ್ಕೆ ಸೆ.12ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.
ಪ್ರಕರಣದ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷರಾದ ಪದ್ಮ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ ಸವಣಾಲು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಡಿರುದ್ಯಾವರ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಪ್ರಸನ್ನ ಗೌಡ ಬಾರ್ಯ, ವಿಜಯಗೌಡ, ಉಷಾ ವೆಂಕಟರಮಣ ಗೌಡ, ಸುರೇಶ್ ಕೌಡಂಗೆ ಹಾಗೂ ಗ್ರಾಮ ಸಮಿತಿ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸಿತರಿದ್ದರು.