24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

ಕುವೆಟ್ಟು : ಅಂಗನವಾಡಿ ಕೇಂದ್ರ ಸುಣ್ಣದಕೆರೆ ಬಾಲ ವಿಕಾಸ ಸಮಿತಿ ಹಾಗೂ ಸ್ವಾಗತ ಸಮಿತಿ ಸುಣ್ಣದಕೆರೆ ಮತ್ತು ಊರ ನಾಗರೀಕರ ಜಂಟಿ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಸುಣ್ಣದಕೆರೆಯಲ್ಲಿ ಸುಮಾರು ಮೂವತ್ತು ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಜೀವನಕ್ಕೆ ಪಾದಾರ್ಪಣೆಗೈದ ಶ್ರೀಮತಿ ವಸಂತಿ ರವರಿಗೆ ಸನ್ಮಾನ ಕಾರ್ಯಕ್ರಮವು ಇತೀಚೆಗೆ ಜರುಗಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಭಾರತೀ ಎಸ್ ಶೆಟ್ಟಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುವೆಟ್ಟು ಗ್ರಾ.ಪಂ. ಸದಸ್ಯರಾದ ಶಮಿಮುಲ್ಲ ಕೆ ವಹಿಸಿದರು.

ಮುಖ್ಯ ಅತಿಥಿಯಾಗಿ ಕುವೆಟ್ಟು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಗಣೇಶ್ ಕುಲಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಸುಮನಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುಸ್ತಫಾ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು ಇದರ ಮುಖ್ಯೋಪಾಧ್ಯಯರಾದ ನಾಗಪ್ಪರವರು, ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಮುಸ್ತಫಾ, ಮೈಮುನ್ನಿಸ, ಮೋಹಿನಿ, ಮಾಜಿ ಕುವೆಟ್ಟು ಗ್ರಾ. ಪಂ. ಸದಸ್ಯರಾದ ಕೆ ಸಲೀಮ್, ಬಾಲವಿಕಾಸ ಸಮಿತಿ ಸುನ್ನದಕೆರೆ ಅಂಗನವಾಡಿ ಅಧ್ಯಕ್ಷರಾದ ಶೈದ ಭಾನು, ಪಡಂಗಡಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಪ್ರೀತಿ ಶೆಟ್ಟಿ , ಸ್ಥಳೀಯ ಮಸೀದಿಯ ಮಾಜಿ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಉಪಸ್ಥಿತರಿದ್ದರು.

ವಸಂತಿ ಹಾಗೂ ಅವರ ಪತಿ ಮೋಹನ್ ಆಚಾರ್ಯ ಕೆ ಇವರನ್ನು ಸನ್ಮಾನಿಸಲಾಯಿತು ಹಾಗೂ ಸಹಾಯಕಿಯಾಗಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಿ. ಫಾತುಮ್ಮಾ ಹಾಗೂ ನೂರಿನ್ನಿಸರವರನ್ನು 1988 ರಲ್ಲಿ ಅಂಗನವಾಡಿ ಸ್ಥಾಪನೆ ಗೊಳ್ಳಲು ಶ್ರಮಿಸಿದ ಸ್ಥಾಪಕ ಅಧ್ಯಕ್ಷರಾದ ಪಿ. ಕೆ ಆಲಿಯಬ್ಬಾರವನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಪ್ರಸ್ತುತ ಪ್ರಭಾರಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತಿರುವ ಆಶಾ ಕಾರ್ಯಕರ್ತೆ, ಸಹಾಯಕಿ ಶ್ರೀಮತಿ ಸುನಿತಾ,ಸ್ಥಳೀಯ ಆಶಾ ಕಾರ್ಯಕರ್ತೆ ಶ್ರೀಮತಿ ಜಲಜಾಕ್ಷಿರವರಿಗೆ ವಿಶೇಷ ಉಡುಗೊರೆಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಕೆ. ಸಲೀಂ ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಆಶಾಲತಾ ನಿರೂಪಿಸಿದರು, ಸ್ಥಳೀಯ ಕಾರ್ಯಕರ್ತೆ ಜಲಜಾಕ್ಷಿರವರು ಧನ್ಯವಾದವಿತ್ತರು.

Related posts

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya
error: Content is protected !!