37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು  ಸೆ.13ರಂದು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ ಅಜಿತ್ ಆರಿಗರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ವರ್ಷ ರೂ. 1.43 ಕೋಟಿ ವ್ಯವಹಾರ, ರೂ. 54.22 ಲಕ್ಷ ನಿವ್ವಳ ಲಾಭ ಗಳಿಸಿದ್ದು ಶೇ 12 ಡಿವಿಡೆಂಟ್ ಘೋಷಿಸಿದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅತಿ ಹೆಚ್ಚು ಪಿಗ್ಮಿ ಸಂಗ್ರಹಕರಾದ ರಾಮದೇವಿ, ಪ್ರೇಮರವರನ್ನು ಹಾಗೂ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತ್ತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಕುಮಾರ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷೆ ಗಣೇಶ್ ಭಂಡಾರಿ, ನಿರ್ದೇಶಕರುಗಳಾದ ಮುನಿರಾಜ್ ಅಜ್ರಿ, ಪುರಂದರ, ರಾಧಾ, ನಾರಾಯಣ ಆಚಾರ್, ಅಶೋಕ್ ರೈ. ಶ್ರೀನಾಥ್ ಕೆ.ಎಮ್, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ, ಹರಿಯಪ್ಪ ನಾಯ್ಕ್, ಪ್ರೇಮ., ಡಿ.ಸಿ.ಸಿ. ಪ್ರತಿನಿಧಿ ಸಂದೇಶ್, ಸಂಘದ ಸದಸ್ಯರು, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಗಣೇಶ್ ಸ್ವಾಗತಿಸಿ ನಿರ್ದೇಶಕರಾದ ಶ್ರೀನಾಥ್ ಕೆ.ಎಮ್. ಧನ್ಯವಾದವಿತ್ತರು.

Related posts

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!