ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ವತಿಯಿಂದ ದ.ಕ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಗೆ 45 ದ್ರವಸಾರಜನಕ ಜಾಡಿಗಳ ವಿತರಣಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೆ. 13 ರಂದು ನಡೆಯಿತು.
ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ದ್ರವಸಾರಜನಕ, ಜಾಡಿಗಳ ವಿತರಣೆಯನ್ನು ಮಾಡಿದರು.
ಮುಖ್ಯ ಅತಿಥಿಗಳಾಗಿ ಎಸ್.ಕೆ.ಆರ್.ಡಿ.ಪಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್, ಎಸ್.ಕೆ.ಆರ್.ಡಿ.ಪಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಉಪನಿರ್ದೇಶಕರು ಶಾಂತರಾಮ್ ಆರ್, ಪೈ, ಎಸ್.ಕೆ.ಆರ್.ಡಿ.ಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀನಿವಾಸ್ ರಾವ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ನಿರ್ದೇಶಕ ಜನಾರ್ದನ್, ಇಲಾಖೆಯ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾದೇಶಿಕ ನಿದೇ೯ಶಕ ಆನಂದ ಸುವರ್ಣ ಸ್ವಾಗತಿಸಿದರು. ನಿದೇ೯ಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಧನ್ಯವಾದವಿತ್ತರು.