April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

ಉಜಿರೆ : ಕಳೆದ ಎರಡು ವರ್ಷಗಳಿಂದ ಎಡ ಬದಿಯ ಸೊಂಟ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಪರಿಷ್ಕೃತ ಸೊಂಟದ ಕೀಳು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಹಿಂದೆ ಇದೇ ಮಹಿಳೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ ಮಹಿಳೆಗೆ ಸೊಂಟ ನೋವು ವಾಸಿಯಾಗದೇ ಇದ್ದಾಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದಿದ್ದರು.
ರೋಗಿಯನ್ನು ಕೂಲಂಕುಷವಾಗಿ ಪರೀಕ್ಷಿದ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ. ಶತಾನಂದ ಪ್ರಸಾದ್ ರಾವ್ ಮತ್ತು ಡಾ. ಹರೀಶ್ ಇವರು ಮಂಗಳೂರಿನಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯಿಂದ ಆಗಿರುವ ತೊಂದರೆಯಿಂದಾಗಿ ಹಳೆಯ ಹಿಪ್ ಸಂಪೂರ್ಣ ತೆಗೆದು ಹೊಸ ಹಿಪ್ ಅಳವಡಿಸಲು 2 ಹಂತದ ಶಸ್ತ್ರಚಿಕಿತ್ಸೆ ನಡೆಸಬೇಕಾದ ಅನಿವಾರ್ಯತೆಯನ್ನು ರೋಗಿಗೆ ಮನದಟ್ಟು ಮಾಡಿಸಿದರು. ಮೊದಲ ಹಂತದಲ್ಲಿ ಸತತ 7 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ ಹಳೆಯ ಸರ್ಜಿಕಲ್ ಹಿಪ್ ತೆಗೆದು, ಸೋಂಕು ತಗಲಿರುವ ಭಾಗಗಳನ್ನು ಸಂಪೂರ್ಣ ಶುಚಿಗೊಳಿಸಿ ಬಳಿಕ ಆಂಟಿಬಯೋಟಾ ಸಿಮೆಂಟ್ ಹಾಕಿ ಫಿಲ್ ಮಾಡಲಾಯಿತು.


ಇದಾದ ಒಂದೂವರೆ ತಿಂಗಳ ಬಳಿಕ 2ನೇ ಹಂತದಲ್ಲಿ ರೋಗಿಗೆ ಪರಿಷ್ಕೃತ ಹಿಪ್ ರಿಪ್ಲೆಸ್‌ಮೆಂಟ್ ಮಾಡಲಾಯಿತು. ಮಂಗಳೂರಿನ ಕೆ.ಎಸ್. ಹೆಗ್ಡೆ ಬೋನ್ ಬ್ಯಾಂಕ್‌ನಿಂದ ಬದಲಿ ಹಿಪ್ ತರಿಸಿ 10 ಗಂಟೆಗಳ ಸತತ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅರೆವಳಿಕೆ ತಜ್ಞರಾದ ಡಾ| ಸುಪ್ರೀತ್ ಆರ್ ಶೆಟ್ಟಿ ಸಹಕರಿಸಿದರು. ಈ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ರೋಗಿ ಗುಣಮುಖರಾಗಿದ್ದು, ಇದೊಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಅಭೂತಪೂರ್ವ ಸಾಧನೆಯಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿದರು.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಸಾಧನೆ ಮತ್ತು ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಸಂತೋಷ ವ್ಯಕ್ತಪಡಿಸಿದರು ಎಂದು ಅವರು ತಿಳಿಸಿದ್ದಾರೆ.

Related posts

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!