September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ವಸತಿ ಕಾಲೇಜಿನ ಪ್ರಾಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ಇವರು ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ನಿಶ್ಮಿತಾ ಮತ್ತು ಅಭಿಷ್ಟ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮರ್ಲಿನ್ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
error: Content is protected !!