ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ಸೆ. 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕುಲಪತಿಯಾಗಿರುವ ಶ್ರೀಮತಿ ಡಾ. ಶಲೀಪ್ ಎ.ಪಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ವಿದ್ಯಾರ್ಥಿನಿಯರಿಂದ ಸಂವಿಧಾನದ ಪೀಠಿಕೆಯನ್ನು ಓದಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು ನಂತರ ಆ ಪೀಠಿಕೆಯ ಅರ್ಥವನ್ನು ತಿಳಿಸಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು. ಜಾತ್ಯತೀತ, ಸೆಕ್ಯುಲರಿಸಂ ಹಾಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲರೂ ಇಲ್ಲಿ ಸಮಾನರು ಎಲ್ಲಾ ರೀತಿಯ ಸ್ವಾತಂತ್ರ್ಯ ನಮಗೆ ಇದೆ, ಎಲ್ಲರಿಗೂ ಸಮಾನ ಅವಕಾಶವಿದೆ ಭ್ರಾತೃತ್ವ ಸೌಹಾರ್ದತೆಯ ನೆಲೆಗಳಲ್ಲಿ ನಮ್ಮ ಸಂವಿಧಾನದಲ್ಲಿ ಕೆಲಸ ಕಾರ್ಯಗಳು ನಡೆಯುತ್ತವೆ. ಇವೆಲ್ಲವೂ ನಮಗೆ ನಾವೇ ನೀಡುತ್ತೇವೆ ಎಂದು ನವೆಂಬರ್ ತಿಂಗಳ 26 ರಂದು ಸಂವಿಧಾನದ ಪೀಠಿಕೆಯನ್ನು ಬರೆದಿರುತ್ತೇವೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಈ ರೀತಿಯ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಶಾಂತಿ ನೆಮ್ಮದಿಯನ್ನು ನೀಡುತ್ತಾ ಬಂದಿದೆ ಎಂದು ಹೇಳಿ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಡೆದ ಪ್ರಭಂದ ಸ್ಪರ್ಧೆ ಹಾಗೂ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ವಿದ್ಯಾರ್ಥಿನಿ ಕು. ಪವಿತ್ರ ಕಾರ್ಯಕ್ರಮ ನಿರೂಪಿಸಿದರು.