September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪಟ್ಟಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 67/2023 ಕಲಂ: 27(ಬಿ) ಎನ್‌ ಡಿಪಿಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ.

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya
error: Content is protected !!