ವೇಣೂರು: ದುಶ್ಚಟಗಳೇ ಮಾನವನ ಅವನತಿಗೆ ಕಾರಣ, ಪುಸ್ತಕ ಹಿಡಿಯುವ ಕೈಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ಧಿಗಳು ಮತ್ತು ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳಿಗೆ ಆಕರ್ಷಿತರಾಗುವುದರಿಂದ ಜಾಗೃತರಾಗಿರಬೇಕು ಎಂದು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಇದರ ನಿರ್ದೇಶಕರಾಗಿರುವ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜರುಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ವೇಣೂರು ವಲಯ ಮತ್ತು ಲಯನ್ಸ್ ಕ್ಲಬ್ ವೇಣೂರು ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.16 ರಂದು ಸಂಸ್ಥೆಯಲ್ಲಿ ನಡೆಯಿತು. ವೇಣೂರು ವಲಯದ ನವ ಜೀವನ ಸಮಿತಿ ಅಧ್ಯಕ್ಷರಾದ ಶ್ರೀಧರ ಹೆಗ್ಡೆ ತನ್ನ ಜೀವನ ಅನುಭವವನ್ನು ಹಂಚಿಕೊಂಡು ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದಾಗಿ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ದಕ ಜಿಲ್ಲೆ ನಿರ್ದೇಶಕರು ಮಾಧವ ಕುಲಾಲ್, ಲಯನ್ಸ್ ಕ್ಲಬ್ ವೇಣೂರು ಅಧ್ಯಕ್ಷರಾದ ಕೆ.ಎಸ್. ನಿರಂಜನ್, ಸೇವಾ ಪ್ರತಿನಿಧಿಗಳಾದ ಸುರೇಶ್ ಮತ್ತು ಶ್ರೀಮತಿ ಜಯಂತಿ ಉಪಸ್ಥಿತರಿದ್ಧರು. ಕಿರಿಯ ತರಬೇತಿ ಅಧಿಕಾರಿ ದಯಾನಂದ ಭಂಡಾರಿ ಸ್ವಾಗತಿಸಿದರು. ವಿದ್ಯಾರ್ಥಿ ವಿನೀತ್ ಪ್ರಾರ್ಥಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ವೇಣೂರು ವಲಯದ ಮೇಲ್ವಿಚಾರಕಾದ ಶ್ರೀಮತಿ ಶಾಲಿನಿ ವಂದಿಸಿದ ಕಾರ್ಯಕ್ರಮವನ್ನು ಕಿರಿಯ ತರಬೇತಿ ಅಧಿಕಾರಿ ಸತೀಶ್ ನಿರ್ವಹಿಸಿದರು.