April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು.

ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18ರ ಬದಲಿಗೆ ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ. ನಾಗಪ್ರಶಾಂತ್ ನಿರ್ದೇಶಿಸಿದ್ದಾರೆ.


Related posts

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya
error: Content is protected !!