ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ರೂ. 33600 ಮೌಲ್ಯದ ಸುಮಾರು 48 ಟನ್ ನಷ್ಟು ಮರಳನ್ನು ವಶಪಡಿಸಿಕೊಂಡ ಪ್ರಕರಣ ಸೆ. 15ರಂದು ವರದಿಯಾಗಿದೆ.
ಉರುವಾಲು ನಿವಾಸಿಯಾದ ಸಂದೇಶ್ ಎಂಬಾತನು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ, ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿದ್ದು ಈ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯಲ್ಲಿ ಭೂ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಾಯಲ್ ಗ್ಲಾಡ್ಸನ್ಸ್ ಮಿರಾಂಡ ರವರು, ಸೆ.15 ರಂದು ಬೆಳಿಗ್ಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಬೆಳ್ತಂಗಡಿ ಕಂದಾಯ ನಿರೀಕ್ಷಕರೊಂದಿಗೆ ಸದರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಆರೋಪಿಯು ಸುಮಾರು ರೂ. 33600/ ಮೌಲ್ಯದ ಸುಮಾರು 48 ಟನ್ ನಷ್ಟು ಮರಳನ್ನು ಕಳವು ಮಾಡಿ ಅಕ್ರಮವಾಗಿ ದಾಸ್ತಾನು ಹಾಕಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 66/2023 ಕಲಂ: 379 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.