ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪ್ರಯುಕ್ತ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ಪೆರಿಂಜೆಯ ಉದ್ಯಮಿಗಳಾದ ವಿಕಾಸ್ ಜೈನ್ ಅಧ್ಯಕ್ಷತೆ ವಹಿಸಿ ಶಿಬಿರಕ್ಕೆ ಸರ್ವರ ಸಹಕಾರ ಇರುತ್ತದೆ ಎಂದು ಹೇಳಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ್ ಶೆಟ್ಟಿಯವರು ಶಿಬಿರದ ರೂಪುರೇಷೆ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ
ಕರುಣಾಕರ ಪೂಜಾರಿ , ಪ್ರಗತಿಪರ ಕೃಷಿಕ ವಿದ್ಯಾನಂದ ಜೈನ್ , ಮಾಜಿ ಪಂಚಾಯತ್ ಅಧ್ಯಕ್ಷೆ ಹೇಮಾ ವಸಂತ , ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ , ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಪೂರ್ವ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಮುಂತಾದವರು ಉಪಸ್ಥಿತರಿದ್ದರು.

ಎಸ್.ಡಿ.ಎಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು.
ವಿಜ್ಞಾನ ಶಿಕ್ಷಕ ಹರಿಪ್ರಸಾದ್ ಸ್ವಾಗತಿಸಿದರು. ಗಣಿತ ಶಿಕ್ಷಕ ಸುಧೀರ್ ಕುಮಾರ್ ವಂದಿಸಿದರು.

Leave a Comment

error: Content is protected !!