ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ ಸರ್ ಎಂ. ವಿಶ್ವೇಶ್ವರಯ್ಯನವರು ಎಂದು ಉಜಿರೆಯ ಎಸ್.ಡಿ.ಯಂ. ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಅವರು ನುಡಿದರು.

ಇದೇ ಸಂದರ್ಭದಲ್ಲಿ ಭಾರತದ ಸಂವಿಧಾನ ಸಹಿಷ್ಣುತೆ, ಸಹಬಾಳ್ವೆಗೆ ಎಲ್ಲಾ ನಾಗರಿಕರಿಗೂ ಸಮಾನ ಅವಕಾಶವನ್ನು ನೀಡಿದೆ ಎಂದು ಎಸ್.ಡಿ.ಯಂ. ಪಿ.ಯು ಕಾಲೇಜಿನ ಉಪನ್ಯಾಸಕಿ ಶ್ರೀ ದಿವ್ಯಾ ಕುಮಾರಿ ನುಡಿದರು.

ಅವರು ಇಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ತರಬೇತಿ ಕೇಂದ್ರವು ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು, ಹಿರಿಯ ತರಬೇತಿ ಅಧಿಕಾರಿ ರತ್ನಾಕರ್ ಅವರು ಸ್ವಾಗತಿಸಿದರು.

Leave a Comment

error: Content is protected !!