23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ.15 ರಂದು ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ಎಚ್.ಕೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘವು 2022 – 23ನೇ ಸಾಲಿನಲ್ಲಿ ಒಟ್ಟು 2,48,758 ಲೀಟರ್ ಹಾಲನ್ನು ಸಂಗ್ರಹಿಸಿದ್ದು ಒಟ್ಟು 2.43 ಲಕ್ಷ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ.

ಸಂಘದ ಅಧ್ಯಕ್ಷೆ ಶ್ವೇತಾ ಎಚ್.ಕೆ ಮಾತನಾಡಿ ಸಂಘವು ಈ ಸಾಲಿನಲ್ಲಿ ಸ್ವಂತ ನಿವೇಶನವನ್ನು ಖರೀದಿಸಿದ್ದು ಸಂಘದ ಸದಸ್ಯರ ಅನುಮತಿಯೊಂದಿಗೆ ಈ ಸಾಲಿನ ಲಾಭಾಂಶ ಮತ್ತು ಡಿವಿಡೆಂಡನ್ನು ನೂತನ ಕಟ್ಟಡದ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು ಎಂದರು. ಹಾಗೂ ಇನ್ನೂ ಹೆಚ್ಚಿನ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಪ್ರತಿಜ್ಞೆಯನ್ನು ಸರ್ವ ಸದಸ್ಯರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ರಾಜೇಶ್ ಕಾಮತ್ ಮಾತನಾಡಿ ಒಕ್ಕೂಟದಿಂದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಪಶು ವೈದ್ಯಾಧಿಕಾರಿಗಳಾದ ಡಾ. ಜಿತೇಂದ್ರ ಮಾತನಾಡಿ ಹೈನುಗಾರಿಕೆಯಲ್ಲಿ ಬಳಸಬೇಕಾದ ರೋಗನಿರೋಧಕ ಲಸಿಕೆಗಳು, ಸರಳ ಔಷಧಗಳು ಹಾಗೂ ಪಶು ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಕುಂಞಪ್ಪ ಗೌಡ ಕೊಲ್ಲಾಜೆ ಪಳಿಕೆ 10,000 ರೂಗಳನ್ನು, ರಾಮಣ್ಣಗೌಡ ಕೇಚೋಡಿ ಹಾಗೂ ಜಯಂತ ಗೌಡ ಅಡೀಲು ಇವರು ತಲಾ 5,000ಗಳನ್ನು ಕಟ್ಟಡದ ನಿರ್ಮಾಣಕ್ಕಾಗಿ ದೇಣಿಗೆಯನ್ನು ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ವರದಿ ಸಾಲಿನಲ್ಲಿ ಅತ್ಯಂತ ಹೆಚ್ಚಿನ ಹಾಲು ಪೂರೈಸಿದ ಹಾಗೂ ವರ್ಷಪೂರ್ತಿ ಹಾಲು ಪೂರೈಸಿದ ಸದಸ್ಯರನ್ನು ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ಸಾಧನೆಗೈದ ಸದಸ್ಯರ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಸಂಘದ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ವರದಿ ವಾಚಿಸಿದರು .ಶ್ರೀಮತಿ ದಿವ್ಯ ಪ್ರಾರ್ಥಿಸಿದರು. ಶ್ರೀಮತಿ ಸುಂದರಿ ಸ್ವಾಗತಿಸಿದರು. ಶ್ರೀಮತಿ ಹೇಮಾವತಿಯವರು ವಂದಿಸಿದರು. ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದು ಹಾಲು ಪರೀಕ್ಷಕಿ ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!