April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ ವರ್ಷ ರೂ .90. O0ಕೋಟಿ ವ್ಯವಹಾರ ಗಳಿಸಿದು.23.47 ಲಕ್ಷ ಲಾಭ ಗಳಿಸಿದೆ. ಶೇಕಡ 9 ಡಿವಿಡೆಂಟ್ ಘೋಷಿದರು.

ವಾರ್ಷಿಕ ವರದಿಯನ್ನು ಮುಖ್ಯ ಕಾರ್ಯನಿರ್ವಹಣಧಿಕಾರಿ ರಾಘವೇಂದ್ರ ಅಡಪ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ . ಸಿ ಮತ್ತು ಪಿ ಯು. ಸಿ ನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ನಾಭಿರಾಜಿ ಹೆಗ್ಡೆ, ನಿರ್ದೇಶಕರಾದ ಶಿವಪ್ಪ ಪೂಜಾರಿ ಹಾಗೂ ಎನ್‌ಹೆಚ್ ಅಬ್ದುಲ್ ರಹಿಮಾನ್., ಶೇಖರ್ ಪೂಜಾರಿ, ಜನಾರ್ಧನ್ ಪೂಜಾರಿ, ಕೆ ರವಿ, ಬಿ ಹುಸೇನ್, ನೆಬೀಸಾ, ಸಂಗೀತ ಹಾಗೂ ವೃತ್ತಿಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಮುನೀರ್ ಡಿಸಿಸಿ ಪ್ರತಿನಿಧಿ , ಸಿರಾಜುದ್ದೀನ್ ಉಪಸ್ಥಿತರಿದ್ದರು.

ಶಾಹಿದ ಕಾರ್ಯಕ್ರಮ ನಿರೂಪಿಸಿ ಸಂಘದ ಸಿಬ್ಬಂದಿ ನಮಿತಾ ಸ್ವಾಗತಿಸಿ, ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ಧನ್ಯವಾದವಿತ್ತರು.

Related posts

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
error: Content is protected !!