ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ತರಬೇತಿ ಅಭ್ಯರ್ಥಿಗಳಿಗೆ ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಉಜಿರೆ ಶ್ರೀ ಧರ್ಮಸ್ಥಳ ಪ್ರಕೃತಿ ಚಿಕಿತ್ಸ ಕಾಲೇಜು ಇವರಿಂದ ನಡೆಸಲಾಯಿತು.
ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾ ಕಾಲೇಜು ಇಲ್ಲಿನ ಪ್ರಾಂಶುಪಾಲರು ಡಾ. ಸುಜಾತ ಕೆ. ಜೆ ಮತ್ತು ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರು ಸೋಮನಾಥ.ಕೆ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಕ್ಯಾನ್ಸರ್ ಲಿಂಫೋಮಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಡಾ. ಅಭಿಜ್ಞಾ ರೈ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಡಾ. ಅಮೀನ, ಡಾ. ಅರ್ಚನಾ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ಅಶ್ವಿನಿ ನಿರೂಪಿಸಿ ಧನ್ಯವಾದವಿತ್ತರು.