ಉಜಿರೆ: ರಾಷ್ಟ್ರೀಯ ಸುಪೋಷಣಾ ಮಾಸಾಚರಣೆಯ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಜಾಗೃತಿ ಕಾರ್ಯಕ್ರಮವು ಸೆ.16 ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಸಿಡಿಪಿಒ ಶ್ರೀಮತಿ. ಪ್ರಿಯಾ ಆಗ್ನೆಸ್ ಕಾರ್ಯಕ್ರಮ ಉದ್ಘಾಟಿಸಿ ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಿರುನಾಟಕ ಮತ್ತು ಚಿತ್ರ ಪ್ರದರ್ಶನದೊಂದಿಗೆ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆಯನ್ನೂ ಏರ್ಪಡಿಸಲಾಯಿತು.
ಪ್ರಕೃತಿದತ್ತವಾದ ಪೋಷಕಯುಕ್ತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಎಂದು ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಅಭಿಪ್ರಾಯಪಟ್ಟರು.
ಗೌರವ ಅತಿಥಿಯಾಗಿ ಎಸ್ ಡಿ.ಎಂ ಸಿ ಬಿ ಎಸ್.ಸಿ ಶಾಲೆಯ ಮುಖ್ಯೋಪಾಧ್ಯಾಯ ಮನಮೋಹನ್ ನಾಯಕ್, ಉಪ ಪ್ರಾಚಾರ್ಯೆ ಡಾ.ಸುಜಾತಾ ದಿನೇಶ್, ಯೋಗ ವಿಭಾಗದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ಶೆಟ್ಟಿ ಮತ್ತು ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ ಡಾ.ಗೀತಾ ಬಿ ಶೆಟ್ಟಿ ಸ್ವಾಗತಿಸಿದರು. ಶ್ರೀಮತಿ ಶ್ವೇತಾ ಡಿ.ಎಲ್. ವಂದಿಸಿದರು.ಡಾ.ಮಧು, ಕಾರ್ಯಕ್ರಮವನ್ನು ನಿರ್ವಹಿಸಿದರು.