April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವವು ಸೆ 17ರಂದು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಲ್ಲಿ ನಡೆಯಿತು.
ರಜತ ಮಹೋತ್ಸವವನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷರಾದ ಕೆಪಿ ಸುಚರಿತ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.


ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ಕುಸುಮಾವತಿ ಕೆ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ರಾಜಶ್ರೀ ಎಸ್ ಹೆಗ್ಡೆ, ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ, ರೈತ ಬಂದು ಆಹಾರೋದ್ಯಮ ಪ್ರೈ.ಲಿನ ಮಾಲಕರಾದ ಶಿವಶಂಕರ್ ನಾಯಕ್, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಬಿ ಸಿ ಟ್ರಸ್ಟ್ ಯೋಜನೆ ಅಧಿಕಾರಿ ದಯಾನಂದ, ಗೌರವ ಉಪಸ್ಥಿತಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಇದರ ವ್ಯವಸ್ಥಾಪಕರಾದ ಡಾ.ರಾಮಕೃಷ್ಣ ಭಟ್ ಎಂ. ಉಪ ವ್ಯವಸ್ಥಾಪಕರಾದ ಡಾ. ಸತೀಶ್ ರಾವ್, ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಡಾ. ಗಣಪತಿ, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಕಣಿಯೂರು ಗ್ರಾಮ ಪಂಚಾಯಿತಿ ಮಾಜಿ ಪ್ರಧಾನರು ಸುದರ್ಶನ್ ಹೆಗ್ಡೆ, ಉಪಾಧ್ಯಕ್ಷರಾದ ಶ್ರೀಮತಿ ಸುನಂದ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಾರತಿ ವರದಿ ವಾಚಿಸಿದರು.

ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿ, ರಜತ ಮಹೋತ್ಸವದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ ಸ್ವಾಗತಿಸಿ, ನಿರ್ದೇಶಕಿ ಚೈತ್ರ ಧನ್ಯವಾದವಿತ್ತರು.

Related posts

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya
error: Content is protected !!