24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೆ.17 ರಂದು ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.


ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧನ್ಯವಾದವಿತ್ತರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಮತ್ತು ಸಂತೋಷ್ ಗೌಡ ಸಮಾರಂಭದ ಆಯೋಜನೆಯಲ್ಲಿ ಸಹಕರಿಸಿದರು.

Related posts

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya
error: Content is protected !!