23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೆ.17 ರಂದು ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.


ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧನ್ಯವಾದವಿತ್ತರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಮತ್ತು ಸಂತೋಷ್ ಗೌಡ ಸಮಾರಂಭದ ಆಯೋಜನೆಯಲ್ಲಿ ಸಹಕರಿಸಿದರು.

Related posts

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!