25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

ಧರ್ಮಸ್ಥಳ :ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.15ರಂದು ಬಹರೈನ್ ಮತ್ತು ಸೆ.17 ರಂದು ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಗುರು ಸೇವಾ ಸಮಿತಿ ಬಹೆರೈನ್ ಬಿಲ್ಲವಾಸ್ ವತಿಯಿಂದ ಕನ್ನಡ ಸಂಘದಲ್ಲಿ 20 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಬ್ರಹ್ಮಶ್ರೀ ನಾರಾಯಣಗೆ ಗುರುಗಳ 169 ಜಯಂತಿ ಕಾರ್ಯಕ್ರಮದಲ್ಲಿ ಬಹರೈನ್ ಬಿಲ್ಲವಾಸ್ ಅಧ್ಯಕ್ಷ ಹರೀಶ್ ಪೂಜಾರಿ, ಮಾಜಿ ಅಧ್ಯಕ್ಷ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ರಾಜ ಕುಮಾರ್, ಕಾರ್ಯದರ್ಶಿ ಸಂಪತ್ ಕುಮಾರ್, ದುಬೈ ಬಿಲ್ಲವ ಫ್ಯಾಮಿಲಿ ಅಧ್ಯಕ್ಷ ದೀಪಕ್ ಪೂಜಾರಿ, ಗೌರವ ಅಧ್ಯಕ್ಷ ಸತೀಶ್ ಪೂಜಾರಿ, ಮಾಜಿ ಅಧ್ಯಕ್ಷ ಪ್ರಭಾಕರ ಸುವರ್ಣ ಕರ್ನೆನಿರೆ, ಶ್ರೀ ರಾಮ ಕ್ಷೇತ್ರ ಸಮಿತಿ ಸದಸ್ಯ ಲೋಕೇಶ್ ಪುತ್ರನ್, ದುಬೈ ಕನ್ನಡ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ದುಬೈ,ಜೀತೇಂದ್ರ ಸುವರ್ಣ, ಮತ್ತು ಸಮಿತಿ ಸದಸ್ಯರು ಹಾಜರಿದ್ದರು. ಸ್ವಾಮೀಜಿಯವರ ಜೊತೆಗೆ ಗುರುದೇವ ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ, ಕೃಷ್ಣಪ್ಪ ಗುಡಿಗಾರ, ರಾಘವೇಂದ್ರ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya
error: Content is protected !!