April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ಬು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೆರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ವಿಶ್ವನಾಥ ಹೊಳ್ಳ,ಉದ್ಯಮಿ ಸಂತೋಷ್ ಹೆಗ್ಡೆ ತೆಂಕಕಾರಂದೂರು, ಪತ್ರಕರ್ತ ಮನೋಹರ್ ಕುಮಾರ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಸುಧಾಮ, ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಪಾಂಡ್ಯೋಟ್ಟು ಸ್ವಾಗತಿಸಿದರು.ಶಿಕ್ಷಕ ಹರೀಶ್ ಹಾಣಿಂಜ ನಿರೂಪಿಸಿದರು.

ಪುರುಷರಿಗೆ, ಯುವತಿಯರಿಗೆ,ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ಜರುಗಿದವು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya
error: Content is protected !!