ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಅಭಿವೃದ್ಧಿಯ ಪ್ರಥಮ ಹಂತವಾಗಿ ರೂ. 25 ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ರಚನೆ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.
ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಚಾಲನೆ ನೀಡಿ, ಗರಿಷ್ಠ ಸಹಕಾರ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷ ಕರುಣಾಕರ ಆಚಾರ್ಯ, ಹಿರಿಯ ಕೃಷಿಕ ರತನ್ ಕುಮಾರ್, ಕಲಂಜ ಗ್ರಾಪಂ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷೆ ಪೂರ್ಣಿಮಾ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲಂಜ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ವಸಂತ ಮಡಿವಾಳ, ದರ್ಣಪ್ಪ ಪೂಜಾರಿ, ಚೆನ್ನಪ್ಪಗೌಡ, ಮುಖ್ಯ ಶಿಕ್ಷಕಿ ಪೂರ್ಣಿಮಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.