April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಈ ದಿನ ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಭಕ್ಷತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ ಹಾಗೂ ಸ್ವಚ್ಛತಾ ನೌಕರರನ್ನು ಸನ್ಮಾನಿಸಲಾಯಿತು ಹಾಗೂ ವಸ್ತ್ರ ವಿತರಣೆ ಮಾಡಲಾಯಿತು.

ಗ್ರಾಮದ ಸ್ವಚ್ಛತೆಯ ನಿರಂತರತೆಯನ್ನು ಕಾಪಾಡುವ ಬಗ್ಗೆ ಮನವರಿಕೆ ಮಾಡಲಾಯಿತು. ಗ್ರಾಮದ ಸ್ವಚ್ಛತೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವಂತಹ ನೌಕರರಿಗೆ ಪಂಚಾಯತಿ ಉಪಾಧ್ಯಕ್ಷರಾದ ಪಿ. ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರರಾವ್, ವಸಂತ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಕನ್ಯಾಡಿ ಆರೋಗ್ಯ ಉಪ ಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಶ್ರೀಮತಿ ಆನ್ಸಿ ಮೇರಿ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya
error: Content is protected !!