April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು.

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು
ಕೃಷಿ ಕೇತ್ರದಲ್ಲಿ ವಿಶೇಷ ಸಾಧನೆಗೈದ ನಾರಾಯಣ ನಾಯ್ಕರಿಗೆ ಸನ್ಮಾನಿಸಿ ಗೌರವಿಸಲಾಯಿತು .

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ನಾಯ್ಕ, ನಿರ್ದೇಶಕರುಗಳಾದ , ಪ್ರಸಾದ್ ನಾಯ್ಕ, ಪ್ರಶಾಂತ ನಾಯ್ಕ, ತಾರನಾಥ, ಲೀಲಾವತಿ, ಸವಿತಾ ಹಾಗೂ ಸಂಘದ ಸಿಬ್ಬಂದಿ ವರ್ಗ, ಪಿಗ್ಮಿ ಸಂಗ್ರಹಗಾರರು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ನಿರ್ದೇಶಕ ಸೀತಾರಾಮ್ ಬಿ. ಎಸ್. ಬೆಳಾಲು ಸ್ವಾಗತಿಸಿ , ಚಿದಾನಂದ ಕಾರ್ಯಕ್ರಮ ನಿರೂಪಿಸಿ ನಿರ್ದೇಶಕ ಚೆನ್ನಕೇಶವ ಧನ್ಯವಾದವಿತ್ತರು.

Related posts

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!