ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಪದ್ಮುಂಜ ಸೇವಾ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡರ ಅಧ್ಯಕ್ಷತೆಯಲ್ಲಿ ಜರಗಿತು.
ಸಂಘವು 2022-2023ನೇ ಸಾಲಿನಲ್ಲಿ 20.25 ಕೋಟಿ ವ್ಯವಹಾರ ನಡೆಸಿ 32 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.22 ಡಿವಿಡೆಂಡ್, ಶೇ.65 ಬೋನಸ್ಸು ರೂ. 1533341.88 ಘೋಷಣೆ ಮಾಡಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಸಿದ 113 ಜನ ಸದಸ್ಯರಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.
ಎಸ್.ಎಸ್.ಎಲ್.ಸಿ., ಪಿ.ಯು.ಸಿ.ಇತರ ಚಟುವಟಿಕೆಗಳಲ್ಲಿ ಉನ್ನತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.
ಸಂಘದ ಸಿಬ್ಬಂದಿ ಹೇಮಲತಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸಂಘದ ಕಾರ್ಯದರ್ಶಿ ಜಯರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಲೆಕ್ಕ ಪರಿಶೋಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು.
ಸಂಘದ ಉಪಾಧ್ಯಕ್ಷ ಉಮೇಶ ಗೌಡ, ನಿಕಟ ಪೂರ್ವ ಅಧ್ಯಕ್ಷರಾದ ಬಾಬು ಗೌಡ, ಮಾಜಿ ಅದ್ಯಕ್ಷರಾದ ರವಿರಾಜ ಹೆಗ್ಡೆ, ಶ್ರೀಶ ಅಂಡಿಲ, ಮಾಧವ ಗೌಡ, ಧರ್ಣಪ್ಪ ಗೌಡ, ನಿರ್ದೇಶಕರಾದ ಸದಾಶಿವ ಶೆಟ್ಟಿ, ರಮಾನಂದ ಎಂ, ರಾಜೇಶ್ ಎ, ಶೀನಪ್ಪಗೌಡ, ಕರಿಯಪ್ಪ, ಪುರುಷೋತ್ತಮ ಗೌಡ, ಉಮೇಶ್ ಪೂಜಾರಿ, ಶ್ರೀಮತಿ ಶಾರದಾ, ಶ್ರೀಮತಿ ಪ್ರತೀಮಾ, ಕೃಷ್ಣನಾಯ್ಕ, ಸುನೀಲ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.