24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

ವೇಣೂರು: ವೇಣೂರಿನಲ್ಲಿ 2024 ಫೆಬ್ರವರಿ 22 ರಿಂದ ಮಾರ್ಚ್ ಒಂದರ ವರೆಗೆ ನಡೆಯುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ಸೌಲಭ್ಯ, ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಮೊದಲಾದ ಜನಮಂಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಹೇಳಿದರು.

ಅವರು ಸೆ.20 ರಂದು ವೇಣೂರಿನಲ್ಲಿ ಯಾತ್ರಿನಿವಾಸದಲ್ಲಿ ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೈನಧರ್ಮದ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ, ವಿಶ್ವಾಸವಿದ್ದು, ಅವುಗಳನ್ನು ತಿಳಿದು ಕೊಂಡು ನಮ್ಮ ದೈನಂದಿನ ಜೀವನದಲ್ಲಿ ಅನುಷ್ಠಾನಗೊಳಿಸಿದಾಗ ಜೀವನ ಪಾವನವಾಗುತ್ತದೆ. ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ ಎಂದು ಅವರು ಹೇಳಿದರು.

ಮಸ್ತಕಾಭಿಷೇಕ ಸಂದರ್ಭದಲ್ಲಿ ಎಲ್ಲರೂ ಕ್ಷಮಾ ಧರ್ಮದ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಕೊಡುಗೆಯಾಗಿ ನೀಡಿದ ಕೃತಕ ಕಾಲನ್ನು ಮಂಗಳೂರು ಬೊಂದೇಲ್‌ನ ಪಾರ್ವತಿ ಅವರಿಗೆ ನೀಡಲಾಯಿತು.

ಉತ್ತಮ ಕ್ಷಮಾ ಧರ್ಮದ ಬಗ್ಗೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕಿ ಬೆಳ್ತಂಗಡಿಯ ಪ್ರೊ. ತ್ರಿಶಲಾ ಯು. ಮಲ್ಲ, ನಾವು ಮನೆಯಲ್ಲಿಯೂ, ಸಮಾಜದಲ್ಲಿಯೂ ಮನ, ವಚನ, ಕಾಯದಿಂದ ಶಾಂತಿ, ಸಮಾಧಾನದಿಂದ ವರ್ತಿಸಿದರೆ ನಮಗೂ, ಇತರರಿಗೂ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.

ವಸ್ತುವಿನ ಸಹಜ ಗುಣವೇ ಧರ್ಮ ಆಗಿದ್ದು ಕ್ಷಮಾ, ಮಾರ್ದವ, ಆರ್ಜವ, ಶೌಚ, ಸತ್ಯ, ಸಂಯಮ, ತಪ, ತ್ಯಾಗ, ಆಕಿಂಚನ್ಯ, ಬ್ರಹ್ಮಚರ್ಯ, ಮೊದಲಾದ ದಶಧರ್ಮಗಳು ನಮ್ಮ ಆತ್ಮನ ಸಹಜ ಗುಣಗಳಾಗಿವೆ. ಎಲ್ಲವೂ ಶ್ರೇಷ್ಠವಾದುದರಿಂದ ಉತ್ತಮ ಎಂಬ ವಿಶೇಷಣ ಬಳಸುತ್ತೇವೆ. ಮನ, ವಚನ, ಕಾಯದದಿಂದ ಕ್ರೋಧವನ್ನು ನಿಯಂತ್ರಿಸಿ ಕ್ಷಮಾ ಗುಣ ಬೆಳೆಸಿಕೊಳ್ಳಬಹುದು. ಕ್ರೋಧ ಅಳಿಸಿ, ಕ್ಷಮಾ ಗುಣವನ್ನು ಉಳಿಸಿ, ಬೆಳೆಸಬೇಕು. ಕ್ಷಮಾ ಗುಣ ವೀರರ ಲಕ್ಷಣವಾಗಿದೆ. ಬಾಹುಬಲಿ ಸಾಧಿಸಿ ತೋರಿಸಿದ ಅಹಿಂಸೆಯಿಂ ದ ಸುಖ, ತ್ಯಾಗದಿಂದ ಶಾಂತಿ ಎಂಬ ಜೀವನಮೌಲ್ಯ ಸಾರ್ವಕಾಲಿಕ ಮಾನ್ಯತೆಯನ್ನು ಹೊಂದಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಎಂಜಿನಿಯರ್ ಶಿವಪ್ರಸಾದ ಅಜಿಲ ಉಪಸ್ಥಿತರಿದ್ದರು. ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ಸ್ವಾಗತಿಸಿದರು.

ಅಳದಂಗಡಿ ಮಿತ್ರಸೇನ ಜೈನ್ ಶಾಂತಿಮಂತ್ರ ಪಠಣ ಮಾಡಿದರು.

ಕಾರ್ಯಕ್ರಮ ನಿರ್ವಹಿಸಿದ ಮಹಾವೀರ ಜೈನ್ ಮೂಡುಕೋಡಿಗುತ್ತು ಧನ್ಯವಾದವಿತ್ತರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!