April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಶಿಶಿಲ: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ರೋಟರಿ ಕ್ಲಬ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಶಿಶಿಲ, ಜೇಸಿಐ ಸಂಸ್ಥೆ ನೆಲ್ಯಾಡಿ ಇವುಗಳ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ ಸಂಚಾರಿ ನೇತ್ರಾ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಸೆ.22ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.


ಶಿಬಿರದ ಉದ್ಘಾಟನೆಯನ್ನು ಶಿಶಿಲ ಗ್ರಾ.ಪಂ.ಅಧ್ಯಕ್ಷ ಸುಧಿನ್ ನೆರವೇರಿಸಿದರು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ನ ಅಧ್ಯಕ್ಷೆ ಡಾ| ಗೌರಿ ಪೈ, ಶ್ರೀ ಕ್ಷೇ.ಧ.ಗ್ರಾ.ಯೋ ಅರಸಿನಮಕ್ಕಿ ವಲಯದ ಮೇಲ್ವಿಚಾರಕಿ ಶಶಿಕಲಾ, ಅರಸಿನಮಕ್ಕಿ ಶ್ರೀ ದುರ್ಗಾ ಕ್ಲಿನಿಕ್ ನ ವೈದ್ಯೆ ಹರ್ಷಿತಾ ಸುವಿನ್, ವಿಶ್ವಾಸ್ ಶೆಣೈ ಡಿಸ್ಟಿಕ್ ಚೆಯರ್ ಮೆನ್ ಪಬ್ಲಿಕ್ ಇಮೇಜ್‌ ರೋಟರಿ ಜಿಲ್ಲೆ ನೆಲ್ಯಾಡಿ ಜೇಸಿಐ ಅಧ್ಯಕ್ಷ ಮತ್ತು ನೆಲ್ಯಾಡಿ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತು ಶಿಶಿಲ ಗ್ರಾ.ಪಂ. ಉಪಾಧ್ಯಕ್ಷ ಯಶೋಧರ್.ಕೆ.ಪಿ, ಶಿಶಿಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡ‌ ಉಪಸ್ಥಿತರಿದ್ದರು.


ಮಂಗಳೂರು ನೇತ್ರ ಪರಿವೀಕ್ಷಕರಾದ ಡಾ| ಶಾಂತರಾಜ್ ಶಿಬಿರದ ಮಾಹಿತಿ ಮತ್ತು ಕಣ್ಣಿನ ಬಗ್ಗೆ ಮಾಹಿತಿ ನೀಡಿದರು. ಡಾ| ಸೃಷ್ಟಿ, ಡಾ| ರಿಯಾ, ಕಣ್ಣಿನ ತಪಾಸಣೆ ನಡೆಸಿದರು.


49ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಸ್ವಾಗತಿಸಿ, ನಿರೂಪಿಸಿದರು. ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು ಧನ್ಯವಾದವಿತ್ತರು.

170 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya
error: Content is protected !!