September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

ನಿಡ್ಲೆ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡ್ಲೆಯಲ್ಲಿ ಸೆ.23ರಂದು ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲಪಳಿಕೆ ನಿವಾಸಿ ರಾಮಣ್ಣ ಗೌಡ (58ವ) ಎಂಬವರ ಮೇಲೆ ಮರ ಬಿದ್ದಿದ್ದು, ತೀವ್ರ ಗಾಯಗೊಂಡಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜವಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಗೃಹಲಕ್ಷ್ಮೀಯರ ಖಾತೆಗೆ ರೂ.340.31 ಕೋಟಿ: ಬಿ. ಪದ್ಮನಾಭ ಸಾಲ್ಯಾನ್-ಗ್ಯಾರಂಟಿ ಯೋಜನೆಯಡಿ 56,347 ಯಜಮಾನಿಯರಿಗೆ ರೂ.2000 ಮಾಸಿಕ ನೆರವು

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya
error: Content is protected !!